ಕಾಲ ಮಿಂಚಿಲ್ಲ, ವಾಪಸ್ ಬನ್ನಿ: ಈಶ್ವರಪ್ಪಗೆ ವಿಜಯೇಂದ್ರ ಮನವಿ

Prasthutha|

ಶಿವಮೊಗ್ಗ: ಪಕ್ಷೇತರ ಸ್ಪರ್ಧೆಗೆ ಸಿದ್ಧವಾಗಿರುವ ಈಶ್ವರಪ್ಪರನ್ನು ಬಿಜೆಪಿಗೆ ವಾಪಸ್ಸಾಗಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಪಸ್ ಬರಲು ಮನವಿ ಮಾಡಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲು ಪಕ್ಷದ ಹಿತದೃಷ್ಟಿಯಿಂದ ಕೆ.ಎಸ್.ಈಶ್ವರಪ್ಪ ಅವರು ನಮ್ಮೊಂದಿಗೆ ಕೈಜೋಡಿಸಬೇಕು. ಈಶ್ವರಪ್ಪರವರೇ ನೀವು ಹಿರಿಯರು. ರಾಜ್ಯದಲ್ಲಿ ಬಿಜೆಪಿ ಕಟ್ಟಲು ನಿಮ್ಮದೂ ದೊಡ್ಡ ಪಾಲಿದೆ. ಯಾವುದೋ ಪರಿಸ್ಥಿತಿ, ತಪ್ಪು ಸಂದರ್ಭ ತಮ್ಮನ್ನು ಈ ಸನ್ನಿವೇಶಕ್ಕೆ ದೂಡಿದೆ. ಕಾಲ ಮಿಂಚಿಲ್ಲ, ವಾಪಸ್ ಬನ್ನಿ ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಹೋದರ ಬಿ.ವೈ. ರಾಘವೇಂದ್ರ ಮಾಡಿರುವ ಅಭಿವೃದ್ಧಿಯ ಬಗ್ಗೆ ಜನರು ಮಾತಾಡುತ್ತಿದ್ದಾರೆ. ಹೀಗಾಗಿ ಅವರು ಈ ಬಾರಿ ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಈಶ್ವರಪ್ಪ ಅವರಿಗೆ ಇನ್ನೂ ಕಾಲ ಮಿಂಚಿಲ್ಲ. ವಾಪಸ್ ಬಂದು‌ ನಮ್ಮ ಜೊತೆ ಕೈ ಜೋಡಿಸಿ ಎಂದು ಮತ್ತೊಮ್ಮೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ವಿಜಯೇಂದ್ರ ಹೇಳಿದರು.



Join Whatsapp