ದೆಹಲಿ ಮದ್ಯನೀತಿ ಹಗರಣ: ಕೆ ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ

Prasthutha|

ದೆಹಲಿ: ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

- Advertisement -

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮದ್ಯನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು.

ವಿಚಾರಣೆ ವೇಳೆ ಇಡಿ ಪರವಾಗಿ ವಾದ ಮಂಡಿಸಿದ ವಕೀಲ ಜೊಹೆಬ್ ಹುಸೇನ್, ಕವಿತಾ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ತನ್ನ ಮೊಬೈಲ್ನಲ್ಲಿ ಸಿಕ್ಕಿದ್ದ ಸಾಕ್ಷ್ಯಗಳು ಸೇರಿದಂತೆ ತನ್ನ ವಿರುದ್ಧದ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ.



Join Whatsapp