ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರಲು ಸಜ್ಜಾಗಿದ್ದರೂ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಬೇಡ ಎಂದಿದ್ದರು.ಇದೀಗ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಖು ಡಿಕೆಶಿ ರೆಡ್ ಸಿಗ್ನಲ್ ತೋರಿಸಿದ್ದಾರೆ ಎನ್ನಲಾಗಿದೆ. ಡಿಕೆಶಿ ಭೇಟಿ ವೇಳೆ ನಿಶಾ ಯೋಗೇಶ್ವರ್ ಕಣ್ಣೀರಿಟ್ಟಿದ್ದಾರೆ.
ನಿಶಾ ಯೋಗೇಶ್ವರ್ ಅವರು ಡಿಕೆ ಶಿವಕುಮಾರ್ ಅವರನ್ನು ಇಂದು ಭೇಟಿಯಾದ್ರು. ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಆಗಮಿಸಿದ ನಿಶಾ, ಡಿಕೆಶಿ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಬಗ್ಗೆ ತಮ್ಮ ಆಸೆ ಮತ್ತೊಮ್ಮೆ ವ್ಯಕ್ತಪಡಿಸಿದರು. ಕೊನೆಗೂ ಡಿಕೆಶಿ ಒಪ್ಪಿಗೆ ನೀಡಿದರು ಎನ್ನಲಾಗಿದೆ.
ಕೆಲ ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಿಶಾ ಯೋಗೇಶ್ವರ್ ಭಾಗಿಯಾಗಿದ್ದರು. BMICAPA ಬೋರ್ಡ್ ಅಧ್ಯಕ್ಷರಾಗಿ ರಘುನಂದನ್ ರಾಮಣ್ಣ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ನಿಶಾ ಯೋಗೇಶ್ವರ್ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ ಡಿಕೆ ಸುರೇಶ್ ಜೊತೆ ಚರ್ಚೆ ಕೂಡ ನಡೆಸಿದ್ದರು. ಇದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು.