ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರಲ್ಲಿ ಈಗ ಯಾವುದೇ ಅಸಮಾಧಾನವಿಲ್ಲ, ಎಲ್ಲರನ್ನೂ ಕರೆಸಿ ಅವರವರ ಸಮಸ್ಯೆಗಳನ್ನು ಬಗೆಹರಿಸಿದ್ದಾಗಿ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರಾಜ್ಯ ಮತ್ತು ದೇಶದೆಲ್ಲೆಡೆ ಬಿಜೆಪಿ ಪರ ಉತ್ತಮ ವಾತಾವರಣವಿದೆ, 400 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ, ಕರ್ನಾಟಕದ ಎಲ್ಲ 28 ಸ್ಥಾನಗಳನ್ನು ಜಯಿಸಿ ಗೆದ್ದವರನ್ನು ದೆಹಲಿಗೆ ಕರೆದುಕೊಂಡು ಬರುವುದಾಗಿ ಅಮಿತ್ ಶಾ ಅವರಿಗೆ ಭರವಸೆ ನೀಡಿದ್ದೇನೆ, ಜನರ ಬೆಂಬಲ ನಮ್ಮೊಂದಿಗಿದೆ, ದೇವರ ಕೃಪೆ ನಮ್ಮ ಮೇಲಿದೆ ಮತ್ತು ಎಲ್ಲೆಡೆ ಮೋದಿ ಅಲೆ ಇದೆ ಎಂದು ಯಡಿಯೂರಪ್ಪ ಹೇಳಿದರು.