ಬಂಧನ ಕ್ರಮ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ

Prasthutha|

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಡಿಯಿಂದ ತಮ್ಮನ್ನು ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ಮಂಗಳವಾರ ವಜಾಗೊಳಿಸಿದೆ.

- Advertisement -

ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಆರೋಪ ಮುಖ್ಯಮಂತ್ರಿಗಳ ಮೇಲಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ತಮ್ಮನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ ಎಂದು ಹೈಕೋರ್ಟ್ನಲ್ಲಿ ಕೇಜ್ರಿವಾಲ್ ಪ್ರಶ್ನೆ ಮಾಡಿದ್ದರು.

ಇಡಿ ಕಸ್ಟಡಿಗೆ ಒಪ್ಪಿಸಿದ ಟ್ರಯಲ್ ಕೋರ್ಟ್ ತೀರ್ಪನ್ನೂ ಅವರು ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದ್ದರು. ಇದರ ವಿಚಾರಣೆ ನಡೆಸಿದ ದೆಹಲಿ ಉಚ್ಚ ನ್ಯಾಯಾಲಯ, ಈ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎನ್ನುವ ಅರೋಪದಲ್ಲಿ ಹುರುಳಿದೆ. ಬಂಧನದ ಕ್ರಮವೂ ಕಾನೂನು ಪ್ರಕಾರವೇ ಇದೆ ಎಂದು ಅಭಿಪ್ರಾಯಪಟ್ಟು, ಅರ್ಜಿಯನ್ನು ವಜಾಗೊಳಿಸಲು ನಿರ್ಧರಿಸಿದೆ.



Join Whatsapp