ಬೆಂಗಳೂರು : ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಘೋಷಿಸುವ ಹುನ್ನಾರ ಕೇಂದ್ರ ಸರಕಾರದಿಂದ ನಡೆಯುತ್ತಿದೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಆರೋಪಿಸಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣಾರ್ಥ ಗೌರಿ ಮೀಡಿಯಾ ಟ್ರಸ್ಟ್ ಆಯೋಜಿಸಿದ್ದ ‘ಗೌರಿ ನೆನಹು’ ಆನ್ ಲೈನ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅವರು ಈ ವಿಷಯ ತಿಳಿಸಿದರು.
“ಕೇಂದ್ರ ಸರಕಾರವು ಒಂದು ಭಾಷೆ, ಒಂದು ಆಡಳಿತ ಜಾರಿ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುತ್ತಿದೆ. ಮುಂದೆ ದೇಶದಲ್ಲಿ ಒಂದೇ ಧರ್ಮ ಎಂಬ ನೀತಿ ತಂದು, ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸುವ ಹುನ್ನಾರ ಇದರಲ್ಲಿ ಅಡಗಿದೆ’’ ಎಂದು ದೊರೆಸ್ವಾಮಿ ಹೇಳಿದರು.
“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಮಂತ್ರಿಗಳು ಆಡಳಿತ ನಡೆಸುವ ಬದಲು, ಪಟ್ಟಭದ್ರ ಹಿತಾಸಕ್ತಿಗಳ ಸೂಚನೆಯಂತೆ ನಡೆದುಕೊಳ್ಳುತ್ತಿದ್ದಾರೆ. ಜನರು ಎಚ್ಚೆತ್ತುಕೊಳ್ಳಬೇಕು ಮತ್ತು ಇಂತಹ ಹುನ್ನಾರಗಳ ಈಡೇರಿಕೆಗೆ ಅವಕಾಶ ಕೊಡಬಾರದು’’ ಎಂದು ಅವರು ಎಚ್ಚರಿಕೆ ನೀಡಿದರು.
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ಗೌರಿ ಮೀಡಿಯಾ ಟ್ರಸ್ಟ್ ನ ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಮಾತನಾಡಿದರು.
ಫೋಟೊ ಕೃಪೆ : ದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್