ಛತ್ತೀಸ್ ಗಢದ ದುರ್ಗ್ ಜಿಲ್ಲೆಯಲ್ಲಿ ರಾತ್ರಿ ಅಪಘಾತವೊಂದು ಸಂಭವಿಸಿದೆ.
ನೌಕರರು ತುಂಬಿದ್ದ ಬಸ್ ವೊಂದು 50 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ಕೆಡಿಯಾ ಡಿಸ್ಟಿಲರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು, ಅಪಘಾತದ ನಂತರ ಕಂಪನಿಯು ಮೃತರ ಕುಟುಂಬಗಳಿಗೆ 10ಲಕ್ಷ ರೂ. ಒಬ್ಬ ಸದಸ್ಯನಿಗೆ ಉದ್ಯೋಗ ಮತ್ತು ಗಾಯಾಳುಗಳ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿದೆ.