ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಗೆ ಕೇಜ್ರಿವಾಲ್ ಮೇಲ್ಮನವಿ ಸಲ್ಲಿಕೆ

Prasthutha|

- Advertisement -

ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್‌‌ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಮಂಗಳವಾರ ಹೈಕೋರ್ಟ್ ನಲ್ಲಿ ತಮ್ಮ ಅರ್ಜಿ ವಜಾ ಆದ ಹಿನ್ನೆಲೆ ಸುಪ್ರೀಂಕೋರ್ಟ್ ನಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಲಾಗಿದೆ.

- Advertisement -

ಅರ್ಜಿ ಸಲ್ಲಿಕೆ ಬೆನ್ನಲ್ಲೇ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಜ್ರಿವಾಲ್ ಅವರ ಮನವಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಮನವಿ ಮಾಡಿದರು.



Join Whatsapp