40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿ: ಐವರು ಮಕ್ಕಳು ಮೃತ್ಯು

Prasthutha|

- Advertisement -

ಮಹೇಂದ್ರಗಢ: ಹರ್ಯಾಣದಲ್ಲಿ 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿಯಾಗಿ ಐವರು ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಐದು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನೂ ಹತ್ತಾರು ಮಕ್ಕಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.

- Advertisement -

ಮಾಹಿತಿಯ ನಂತರ ಪೊಲೀಸ್ ಮತ್ತು ಆಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಅಪಘಾತಕ್ಕೆ ಚಾಲಕ ಓವರ್​ಟೇಕ್​ ಮಾಡಿದ್ದೇ ಕಾರಣ ಎನ್ನಲಾಗಿದೆ.



Join Whatsapp