ಮೈಸೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಶಾಸಕ ಟಿ.ಎಸ್.ಶ್ರೀವತ್ಸ, ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಬಾಲರಾಜ್, ಪಕ್ಷದ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ನಗರ ಘಟಕದ ಅಧ್ಯಕ್ಷ ನಾಗೇಂದ್ರ ಹಾಗೂ ಪಕ್ಷದ ಮುಖಂಡರು ಜೊತೆಗಿದ್ದರು.