ಬಿಜೆಪಿಗೆ ಬಿಗ್ ಶಾಕ್: ಮಾಜಿ ಶಾಸಕ, RSS ನಾಯಕ ಕಾಂಗ್ರೆಸ್ ಸೇರ್ಪಡೆ

Prasthutha|

ದಾವಣಗೆರೆ: ಹಾಲಿ ಸಂಸದ ಸಿದ್ಧೇಶ್ವರ್ ಬದಲಿಗೆ ಈ ಬಾರಿ ದಾವಣಗೆರೆ ಲೋಕಸಭಾ ಟಿಕೆಟ್ ಅವರ ಪತ್ನಿಗೆ ನೀಡಲಾಗಿದೆ. ಇದರಿಂದ ಬಿಜೆಪಿಯಲ್ಲೇ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಶಾಸಕ, ಆರ್ ಎಸ್ ಎಸ್ ನಾಯಕ ಟಿ.ಗುರುಸಿದ್ದನಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

- Advertisement -


ದಾವಣಗೆರೆ ಜಿಲ್ಲೆ ಜಗಳೂರು ಕ್ಷೇತ್ರದ ಮಾಜಿ ಶಾಸಕ ಟಿ.ಗುರುಸಿದ್ದನಗೌಡ ಅವರ ನಿವಾಸಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೇಟಿ ನೀಡಿ ಅವರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಂಡರು. ಇನ್ನು ಇದೇ ವೇಳೆ ದಾವಣಗೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರುಸಿದ್ದನಗೌಡ ಪುತ್ರ ಡಾ.ರವಿಕುಮಾರ್ ಸಹ ಕಾಂಗ್ರೆಸ್ ಸೇರಿದರು. ಈ ಮೂಲಕ ಬಿಜೆಪಿಗೆ ಆಘಾತವಾಗಿದೆ.

ಈ ವೇಳೆ ಮಾತನಾಡಿರುವ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ದಾವಣಗೆರೆ ಬಿಜೆಪಿಯಲ್ಲಿ ಉಸಿರು ಗಟ್ಟುವ ವಾತಾವರಣ ಇದೆ. ಇದೇ ಕಾರಣಕ್ಕೆ ಕಟ್ಟಾ ಆರ್ ಎಸ್ ಎಸ್ ವ್ಯಕ್ತಿ ಆಗಿದ್ದ ಗುರುಸಿದ್ದನಗೌಡರು ಕಾಂಗ್ರೆಸ್ ಸೇರಿದ್ದಾರೆ. ಗುರುಸಿದ್ದನಗೌಡ್ರು ಮತ್ತು ಅವರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರಿರುವುದರಿಂದ ನಮಗೆ ಆನೆ ಬಲ ಬಂದಂತಾಗಿದೆ.ಅವರ ಮಾರ್ಗದರ್ಶನದಲ್ಲಿ ನಾವುಗಳು ಮುನ್ನಡೆಯುತ್ತವೆ ಎಂದರು.



Join Whatsapp