ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ.
ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಎನ್ ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶರು 10 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.