ಬೆಂಗಳೂರು: ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಜಯನಗರದಲ್ಲಿ ಬೆಂಜ್ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂದು ಅಪರಿಚಿತರು ಕರೆ ಮಾಡಿದ ಹಿನ್ನೆಲೆಯಲ್ಲಿ ಅಖಾಡಕ್ಕಿಳಿದ ಅಧಿಕಾರಿಗಳು, ಸ್ಕೂಟಿಯಲ್ಲಿದ್ದ ಕೋಟಿ ಕೋಟಿ ಹಣವನ್ನು ಕಾರಿಗೆ ಶಿಫ್ಟ್ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು ಕೂಡಲೇ ಎರಡು ಕಾರುಗಳನ್ನು ನಿಲ್ಲಿಸಿ ಪರಿಶೀಲನೆ ಮಾಡುವಾಗ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪರಿಶೀಲನೆ ನಡೆಸಿದಾಗ ನಗದು ಪತ್ತೆಯಾಗಿದೆ. ಕಂತೆ ಕಂತೆ ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದ ಐವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ವಶಕ್ಕೆ ಹಣವನ್ನು ಜಯನಗರ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಲಾಗಿದೆ.