ಬಿಜೆಪಿಯ ಪ್ರಣಾಳಿಕೆಯನ್ನು ಮತ್ತೆ ನಂಬಲು ಸಾಧ್ಯವಿಲ್ಲ: ಖರ್ಗೆ

Prasthutha|

ನಬದೆಹಲಿ: ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದು, ಆಡಳಿತ ಪಕ್ಷದ ಬಳಿ ಜನರಿಗೆ ನೀಡಲು ಏನೂ ಇಲ್ಲ ಎಂಬುದನ್ನು ಬಿಜೆಪಿಯ ಪ್ರಣಾಳಿಕೆ ಸಾಬೀತುಪಡಿಸುತ್ತದೆ. ಅವರ ಪ್ರಣಾಳಿಕೆಯನ್ನು ಮತ್ತೆ ನಂಬುವುದು ಸರಿಯಲ್ಲ. ಇದು ಜನರಿಗೆ ಹೊಸದಾಗಿ ನೀಡಲು ಏನೂ ಇಲ್ಲ ಎಂಬುದನ್ನು ತೋರಿಸುತ್ತಿದೆ ಎಂದು ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಬಿಜೆಪಿಯ ಪ್ರಣಾಳಿಕೆಯನ್ನು ಮತ್ತೆ ನಂಬಲು ಸಾಧ್ಯವಿಲ್ಲ ಎಂದಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ‘ಮೋದಿ ಅವರ ಗ್ಯಾರಂಟಿ 2024’ ಎಂಬ ಅಡಿಬರಹದೊಂದಿಗೆ ಬಿಡುಗಡೆ ಮಾಡಿದೆ.

- Advertisement -

ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ, ಎಂಎಸ್‌ಪಿ ಹೆಚ್ಚಿಸುವುದಾಗಿ ಮತ್ತು ಕಾನೂನು ಖಾತರಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆದರೆ, ಅವುಗಳೆಲ್ಲಾ ಗ್ಯಾರಂಟಿಗಳಾಗಿಯೇ ಉಳಿದಿವೆ. ಅವರು ತಮ್ಮ ಅಧಿಕಾರಾವಧಿಯಲ್ಲಿ ದೇಶದ ಜನರಿಗೆ ಒಳಿತಾಗುವಂತಹ ಯಾವುದೇ ದೊಡ್ಡ ಕೆಲಸವನ್ನು ಮಾಡಲಿಲ್ಲ. ಯುವಕರು ಉದ್ಯೋಗಕ್ಕಾಗಿ ಎದುರು ನೋಡುತ್ತಿದ್ದಾರೆ. ಹಣದುಬ್ಬರ ಏರಿಕೆಯಾಗಿದೆ. ಮೋದಿಯವರು ದೇಶದಲ್ಲಿನ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ.

18ನೇ ಲೋಕಸಭೆಗೆ 543 ಪ್ರತಿನಿಧಿಗಳನ್ನು ಆಯ್ಕೆ ಮಾಡಲು ದೇಶದಲ್ಲಿ ಲೋಕಸಭೆ ಚುನಾವಣೆಯು ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.



Join Whatsapp