ಜಲಪಾತ ವೀಕ್ಷಣೆಗೆ ಬಂದ ಪ್ರವಾಸಿಗರ ಮೇಲೆ ಜೇನುಹುಳ ದಾಳಿ: ನಾಲ್ವರು ಗಂಭೀರ

Prasthutha|

ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೋಂಡಿ ಜಲಪಾತಕ್ಕೆ ಪ್ರವಾಸಿಗರು ಬೇಟಿ ನೀಡಿದ ವೇಳೆ ಜೇನುಹುಳುಗಳು ದಾಳಿ ಮಾಡಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ.

- Advertisement -

ತಕ್ಷಣ ಸ್ಥಳೀಯ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೇಸಿಗೆ ಹಿನ್ನೆಲೆಯಲ್ಲಿ ಪ್ರವಾಸಿಗರು ಆಟವಾಡಲು ಜಲಪಾತಕ್ಕೆ ಇಳಿದಿದ್ದರು ಎನ್ನಲಾಗಿದೆ. ಜೇನು ದಾಳಿ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಜಲಪಾತ ವೀಕ್ಷಣೆಗೆ ನಿರ್ಬಂಧ ವಿಧಿಸಿದೆ.



Join Whatsapp