ಬಿಜೆಪಿ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ: ಅಮಿತ್ ಶಾ

Prasthutha|

ಭಂಡಾರಾ: ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -

ಭಂಡಾರಾ ಜಿಲ್ಲೆಯ ಸಾಕೋಲಿಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ ಮತ್ತು ತ್ರಿವಳಿ ತಲಾಖ್ ಕೊನೆಗೊಳಿಸಿದ್ದೇವೆ ಆದರೆ ಮೀಸಲಾತಿಯನ್ನು ರದ್ದುಗೊಳಿಸಲಿಲ್ಲ. ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ ಎಂಬುದು ನರೇಂದ್ರ ಮೋದಿಯವರ ಗ್ಯಾರಂಟಿಯಾಗಿದೆ ಎಂದರು.

ಏಕರೂಪ ನಾಗರಿಕ ಸಂಹಿತೆ, 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ, ಮನೆಗಳಿಗೆ ಅನಿಲ ಸಂಪರ್ಕ, ಬಡವರ ಮನೆಗಳಿಗೆ ಉಚಿತ ವಿದ್ಯುತ್ ಭರವಸೆಯನ್ನು ಬಿಜೆಪಿ ಈಡೇರಿಸಲು ಜನರು ಮೂರನೇ ಅವಧಿಗೆ ಪ್ರಧಾನಿ ಮೋದಿಯನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.



Join Whatsapp