ಹಿಂದೂ ಯುವಸೇನೆಯ ಮುಖಂಡನಿಗೆ ಚೂರಿ ಇರಿತ

Prasthutha|

ಬಂಟ್ವಾಳ: ಹಿಂದೂ ಯುವಸೇನೆಯ ಮುಖಂಡ ಮತ್ತು ಉದ್ಯಮಿ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿಯಲ್ಲಿ ಇರಿಯಲಾಗಿದೆ. .ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ.

- Advertisement -

ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್‌ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೂರಿ ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.

ರವಿ ಎಂಬಾತ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು ,ಪ್ರಕರಣ ದಾಖಲಿಸಿಕೊಂಡಿದ್ದಾರೆ.



Join Whatsapp