ಲಕ್ನೊ: ದೇಶದ ಸಂವಿಧಾನ ಬದಲಿಸಲು ಮತ್ತು ಮೀಸಲಾತಿಗೆ ಅಂತ್ಯ ಹಾಡಲು ಬೇಕಾಗಿಯೇ ಬಿಜೆಪಿ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಘೋಷವಾಕ್ಯ ಮೊಳಗಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ಮುಜಾಫರ್‌ನಗರದಲ್ಲಿ ಎಸ್‌ಪಿ ಅಭ್ಯರ್ಥಿ ಹರೇಂದ್ರ ಮಲಿಕ್ ಪರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, 400ಕ್ಕೂ ಅಧಿಕ ಸ್ಥಾನ ಗೆಲ್ಲುವ ಘೋಷವಾಕ್ಯವನ್ನು ಸಂವಿಧಾನ ಬದಲಿಸುವ ಉದ್ದೇಶದಿಂದ ನೀಡಲಾಗಿದೆ. ಬಿಜೆಪಿ ಗೆದ್ದರೆ ಅವರು ಸಂವಿಧಾನವನ್ನಷ್ಟೇ ಬದಲಿಸುವುದಿಲ್ಲ. ಮೀಸಲಾತಿಯನ್ನೂ ಅಂತ್ಯಗೊಳಿಸುತ್ತಾರೆ. ನಿಮ್ಮ ಮತದಾನದ ಹಕ್ಕನ್ನೂ ಕಸಿಯುತ್ತಾರೆ ಎಂದು ಹೇಳಿದ್ದಾರೆ.
ಇ.ಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ಬಳಸಿಕೊಂಡು ಭಯ ಹುಟ್ಟಿಸುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಲಾಗಿದೆ ಎಂದು ಇದೇ ಸಮಯ ಅವರು ಹೇಳಿದ್ದಾರೆ.