ಬೆಳಗಾವಿ: ಬ್ರೇಕ್ ಫೇಲ್ ಆಗಿ ರಾಜಹಂಸ ಬಸ್ ಪಲ್ಟಿಯಾದ ಘಟನೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್ ತಿಮ್ಮಾಪುರ ಏಕಾಏಕಿ ಬ್ರೇಕ್ ಫೇಲ್ ಆಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ