ಬೆಂಗಳೂರು: ಮತ್ತೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಏಪ್ರಿಲ್ 20ರಂದು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.
ಒಂದೇ ದಿನ ರಾಜ್ಯದಲ್ಲಿ ಎರಡು ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ. ಕೆ ಸುಧಾಕರ್ ಪರ ಮತ ಯಾಚನೆ ಮಾಡಲಿದ್ದಾರೆ. ಬಳಿಕ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.