ಕೇಂದ್ರ ಸರ್ಕಾರ 25 ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದೆ: ಮಂಡ್ಯದಲ್ಲಿ ರಾಹುಲ್ ಗಾಂಧಿ ಅಬ್ಬರದ ಭಾಷಣ

Prasthutha|

ಮಂಡ್ಯ: ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಉದ್ಯಮಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಆದರೆ ರೈತರ ಸಾಲಮನ್ನಾ ಮಾಡಿಲ್ಲ ಎಂದು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ಮಾಡಿದ್ದಾರೆ.

- Advertisement -


ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಳೆ ವಿಮೆ ಯೋಜನೆಯಲ್ಲೂ ರೈತರಿಗೆ ದೇಶವ್ಯಾಪಿ ಅನ್ಯಾಯವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 3 ಯೋಜನೆಗಳನ್ನು ಜಾರಿ ಮಾಡುತ್ತೇವೆ. ಕನಿಷ್ಠ ಬೆಂಬಲ ಬೆಲೆ ಯೋಜನೆ, ರಾಷ್ಟ್ರಮಟ್ಟದಲ್ಲಿ ರೈತರ ಬೆಳೆ ಸಾಲ ಮನ್ನಾ ಮತ್ತು 30 ದಿನಗಳಲ್ಲಿ ಬೆಳೆ ವಿಮೆ ಪಾವತಿ ಮಾಡುತ್ತೇವೆ ಎಂದು ತಿಳಿಸಿದರು.

ಚುನಾವಣೆ ಸಂದರ್ಭದಲ್ಲಿ ಎರಡು ವಿಚಾರದಲ್ಲಿ ಹೋರಾಟ ನಡೆಯುತ್ತಿದೆ. ಒಂದು ಕಡೆ ಸಂವಿಧಾನ, ಮತ್ತೊಂದು ಕಡೆ ಸಂವಿಧಾನವನ್ನ ಮುಗಿಸುವ ಕೆಲಸ ನಡೆಯುತ್ತಿದೆ. ಕೆಲ ಸಂಸ್ಥೆಗಳು ಕೆಲವರನ್ನ ಒಳಗೆ ಬಿಟ್ಟು ಕೊಳ್ಳುತ್ತಿದೆ. ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. 25 ಜನರಿಗಾಗಿ ಸರ್ಕಾರ ನಡೆಸುತ್ತಿದ್ದಾರೆ. ಶ್ರೀಮಂತರ ಸಾಲ ಮನ್ನಾ ಮಾಡಲು ಆಗುತ್ತದೆ, ರೈತರ ಸಾಲ ಮನ್ನಾ ಯಾಕೆ ಮಾಡುತ್ತಿಲ್ಲ ಎನ್ನುತ್ತಿದ್ದಾರೆ ಎಂದರು.



Join Whatsapp