ಅಮೀರ್ ಖಾನ್ ಡೀಪ್ಫೇಕ್: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ ಐಆರ್

Prasthutha|

ಮುಂಬೈ: ನಟ ಅಮೀರ್ ಖಾನ್ ಅವರು ನಿರ್ದಿಷ್ಟ ರಾಜಕೀಯ ಪಕ್ಷವೊಂದನ್ನು ಬೆಂಬಲಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಡೀಪ್ ಫೇಕ್ ವಿಡಿಯೊಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಬುಧವಾರ ಎಫ್ ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮಾಹಿತಿ ತಂತ್ರಜ್ಞಾನ ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.


ಈ ಕುರಿತು ಹೇಳಿಕೆ ನೀಡಿರುವ ಆಮೀರ್ ಪರ ವಕ್ತಾರರು, ‘ಕೃತಕ ಬುದ್ಧಿಮತ್ತೆ (AI) ಬಳಸಿ 27 ಸೆಕೆಂಡ್ಗಳ ವಿಡಿಯೊ ತಯಾರಿಸಲಾಗಿದೆ. ಇದು ಸಂಪೂರ್ಣ ನಕಲಿ’ ಎಂದು ಅವರು ಸ್ಪಷ್ಟಪಡಿಸಲು ಬಯಸುತ್ತಾರೆ ಎಂದು ಹೇಳಿದ್ದಾರೆ.



Join Whatsapp