ಹುಬ್ಬಳ್ಳಿ | ನೇಹಾ ಕೊಲೆ ಪ್ರಕರಣ: ಕಠಿಣ ಶಿಕ್ಷೆಗೆ ಆಗ್ರಹಿಸಿ ಮುಸ್ಲಿಂ ಸಮುದಾಯದ ಪ್ರತಿಭಟನೆ

Prasthutha|

ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಜ್’ಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಹಿಂದೂ-ಮುಸ್ಲಿಮರು ಜಂಟಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

- Advertisement -


ನೇಹಾ ಹಂತಕ ಫಯಾಜ್ ಬೆಳಗಾವಿ ಜಿಲ್ಲೆ ಮುನವಳ್ಳಿಯವನಾಗಿದ್ದು, ಅಲ್ಲಿ ಹಿಂದೂ-ಮುಸ್ಲಿಮರು ಜಂಟಿಯಾಗಿ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂಕೇಶ್ವರ – ಸವದತ್ತಿ ಹೆದ್ದಾರಿಯಲ್ಲಿ ಮುಸ್ಲಿಮ್ ಸಮುದಾಯದ ನೂರಾರು ಮಂದಿ ನೇಹಾ ಫೊಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಇತ್ತ ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದೆ.


ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.



Join Whatsapp