ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟನೆಗೆ ನಿರ್ಬಂಧ

Prasthutha|

ನವದೆಹಲಿ: ಮತದಾನ ಪ್ರಕ್ರಿಯೆಯ ಬಳಿಕ ನಡೆಸಲಾಗುವ ಮತದಾನೋತ್ತರ ಸಮೀಕ್ಷೆಗಳನ್ನು ನಡೆಸಬಾರದು ಹಾಗೂ ಅವುಗಳ ಫಲಿತಾಂಶಗಳನ್ನು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ಕಟ್ಡುನಿಟ್ಡಿನ ಸೂಚನೆ ನೀಡಿದೆ.

- Advertisement -

1951 ರ ಜನತಾ ಪ್ರಾತಿನಿಧ್ಯ ಕಾಯಿದೆಯನ್ನು ಉಲ್ಲೇಖಿಸಿ ಆಯೋಗ ಈ ನಿರ್ಬಂಧ ವಿಧಿಸಿದೆ.

ಸುದ್ದಿ ಬ್ಯೂರೋಗಳು, ಮಾಧ್ಯಮ ಸಂಸ್ಥೆಗಳು, ರೇಡಿಯೋ ಮತ್ತು ದೂರದರ್ಶನ ಚಾನೆಲ್‌ಗಳು ಮತದಾನದ ಬಳಿಕ ಸಂಗ್ರಹಿಸುವ ಯಾವುದೇ ಅಭಿಪ್ರಾಯ ಅಥವಾ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ತಿಳಿಸಿದೆ. ಏಪ್ರಿಲ್ 19ರ ಬೆಳಗ್ಗೆ 7 ರಿಂದ ಜೂನ್ 1ರ ಸಂಜೆ 6.30ರವರೆಗೆ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಪ್ರಕಟಿಸುವುದಕ್ಕೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ.



Join Whatsapp