ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಮುನಿಸಿಕೊಂಡಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ, 2019ರ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡಿದ್ದಾರೆ.
ಟಿಕೆಟ್ ಘೋಷಣೆಯಿಂದಲೂ ಕಾಂಗ್ರೆಸ್ ನಾಯಕರಿಗೆ ಮುಜುಗರ ತರಿಸುತ್ತಿದ್ದ ವೀಣಾ ಶುಕ್ರವಾರ ಕಾಂಗ್ರೆಸ್ ಬೃಹತ್ ಮೆರವಣಿಗೆಯಲ್ಲಿ ಪತಿಯೊಂದಿಗೆ ಕಾಣಿಸಿಕೊಳ್ಳುವ ಜತೆಗೆ ಪಕ್ಷದ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಗೆಲುವಿಗೆ ಶ್ರಮಿಸುವ ಮಾತು ಕೊಟ್ಟಿದ್ದಾರೆ.
ವೀಣಾಗೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಲಿ ಅಧ್ಯಕ್ಷೆ ಪುಷ್ಪಾ ಅಮರನಾಥ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರಕ್ಕೆ ನೇಮಕಗೊಂಡಿದ್ದಾರೆ.