ಬೆಂಗಳೂರು: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ಖಂಡಿಸಿ ಎಬಿವಿಪಿ ಇಂದು ಪ್ರತಿಭಟನೆಗೆ ಮುಂದಾಗಿದ್ದು, ಬೆಂಗಳೂರಿನಲ್ಲಿರುವ ಗೃಹಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಶನಿವಾರ ಬೆಳಗ್ಗೆ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಎಬಿವಿಪಿ ಮುಂದಾಗಿದೆ. ನಾಳೆ (ಭಾನುವಾರ) ರಾಜ್ಯಾದ್ಯಂತ ಪ್ರತಿಭಟನೆಗೆ ಎಬಿವಿಪಿ ಕರೆ ಕೊಟ್ಟಿದೆ.
ಸದ್ಯ ಗೃಹಸಚಿವ ಪರಮೇಶ್ವರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ