ಮಧ್ಯ ಪ್ರದೇಶ: ಸುದ್ದಿ ವಾಹಿನಿಯ ಚುನಾವಣಾ ಡಿಬೆಟ್ನಲ್ಲಿ ಇಬ್ಬರು ವ್ಯಕ್ತಿಗಳು ಸ್ಥಳೀಯ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ತಿಕಮ್ ಘಡದಲ್ಲಿ ನಡೆದಿದೆ.ಘಟನೆಯ ವೀಡಿಯೊ ವೈರಲ್ ಆಗಿದೆ.
ನಜರ್ಬಾಗ್ನ ಮೈದಾನದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿನಿಧಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು. ಹಿಮಾಂಶು ತಿವಾರಿ ಮತ್ತು ಬಾಬರ್ ಎಂಬವರು ಬಿಜೆಪಿ ವಿರುದ್ಧ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು ನೀಡಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಉಸ್ತುವಾರಿ ಪ್ರಫುಲ್ ದ್ವಿವೇದಿ ಮೇಲೆ ಕುರ್ಚಿ ಎಸೆದು ಹಲ್ಲೆ ನಡೆಸಿದ್ದಾರೆ.
ದ್ವಿವೇದಿ ಅವರನ್ನು ರಕ್ಷಿಸಲು ಕೆಲವು ಸ್ಥಳೀಯ ಮುಖಂಡರು ಮಧ್ಯಪ್ರವೇಶಿಸಿದ್ದಾರೆ. ಇದು ಜಗಳಕ್ಕೆ ಕಾರಣವಾಗಿದೆ ಎಂದು ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಆನಂದ್ ರಾಜ್ ಹೇಳಿದ್ದಾರೆ.
ಘಟನೆ ಸಂಬಂಧ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.