ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ ಅಂಜುಮನ್ ಸಂಸ್ಥೆ ಪದಾಧಿಕಾರಿಗಳು

Prasthutha|

ಯಾವೊಬ್ಬ ಮುಸ್ಲಿಮ್ ವಕೀಲರು ಆರೋಪಿ ಪರ ವಾದ ಮಂಡಿಸಬಾರದು ಎಂದ ಸಂಸ್ಥೆಯ ಅಧ್ಯಕ್ಷರು

- Advertisement -

ಹುಬ್ಬಳ್ಳಿ: ಕಾಲೇಜು ಆವರಣದಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಅಂಜುಮನ್ ಸಂಸ್ಥೆ ಪದಾಧಿಕಾರಿಗಳು ಹಾಗೂ ಮುಖಂಡರು ಭೇಟಿ ನೀಡಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಬಳಿಕ ಮಾತನಾಡಿದ ಅಂಜುಮನ್ ಸಂಸ್ಥೆ ಅಧ್ಯಕ್ಷ ಎ.ಎಂ. ಹಿಂಡಸಗೇರಿ, ನೇಹಾ ಕೊಲೆ ಅತ್ಯಂತ ಖಂಡನೀಯ. ಪ್ರಕರಣ ಖಂಡಿಸಿ ಶುಕ್ರವಾರವೇ ಹುಬ್ಬಳ್ಳಿ ಅಂಜುಮನ್ ಸಂಸ್ಥೆಯಿಂದ ಪೊಲೀಸ್ ಕಮಿಷನರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ಕೋರ್ಟ್ ರಚನೆ, ನ್ಯಾಯಾಧೀಶರನ್ನು ನೇಮಕ ಮಾಡಬೇಕು. ಅಲ್ಲಿ ಪ್ರಕರಣದ ವಿಚಾರಣೆ ನಡೆದು ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಇದು ರಾಜ್ಯಕ್ಕೇ ಮಾದರಿಯಾಗಬೇಕು ಎಂದು ಹೇಳಿದ್ದಾರೆ.

- Advertisement -

ಪ್ರಕರಣ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿರುವುದು ಸರಿಯಲ್ಲ. ಒಬ್ಬನನ್ನು ಕೊಲೆ ಮಾಡಿದರೆ ಇಡೀ ಜನಾಂಗವನ್ನು ಕೊಲೆ ಮಾಡಿದ ಶಿಕ್ಷೆ ಅಲ್ಲಾಹನು ಕೊಡಲಿದ್ದಾನೆ ಎಂದು ಕುರಾನ್ ಹೇಳುತ್ತದೆ. ಈ ಪ್ರಕರಣವನ್ನು ಸಮಸ್ತ ಮುಸ್ಲಿಮ್ ಸಮುದಾಯ ಸಹ ಖಂಡಿಸುತ್ತಿದೆ. ಆರೋಪಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ಅವರು ಹೇಳಿದರು.

ಈ ಪ್ರಕರಣದಲ್ಲಿ ಜಾತಿ, ಧರ್ಮ ಯಾವುದನ್ನೂ ತರಬಾರದು. ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಹುಬ್ಬಳ್ಳಿ, ಧಾರವಾಡ ಭಾಗದ ಯಾವೊಬ್ಬ ಮುಸ್ಲಿಮ್ ವಕೀಲರು ಆರೋಪಿ ಪರ ವಾದ ಮಂಡಿಸಬಾರದು ಎಂದು ಮುತವಲ್ಲಿಗಳ ಸಮ್ಮುಖದಲ್ಲಿ ನಾವು ತೀರ್ಮಾನಿಸಿದ್ದೇವೆ. ಅದಕ್ಕೆ ವಕೀಲರು ಸಹ ಒಪ್ಪಿಗೆ ನೀಡಿದ್ದಾರೆ. ಆರೋಪಿಗೆ ಶಿಕ್ಷೆಯಾಗುವವರೆಗೂ ಸಮಸ್ತ ಮುಸ್ಲಿಮ್ ಸಮುದಾಯ ಹಿರೇಮಠ ಅವರ ಕುಟುಂಬದ ಜೊತೆಗೇ ಇರಲಿದೆ ಎಂದು ಅಂಜುಮನ್ ಅಂಜುಮನ್ ಸಂಸ್ಥೆ ಅಧ್ಯಕ್ಷ ಎ.ಎಂ. ಹಿಂಡಸಗೇರಿ ಹೇಳಿದರು.



Join Whatsapp