ಹುಬ್ಬಳ್ಳಿ ನೇಹಾ ಹತ್ಯೆ ಕೇಸ್: ಸಿಐಡಿ ತನಿಖೆಗೆ ವಹಿಸುತ್ತೇವೆ ಎಂದ ಸಿದ್ದರಾಮಯ್ಯ

Prasthutha|

ಶಿವಮೊಗ್ಗ: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -


ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸುತ್ತೇವೆ. ಇದಕ್ಕಾಗಿ ವಿಶೇಷ ಕೋರ್ಟ್ ಅನ್ನು ರಚಿಸುತ್ತೇವೆ ಎಂದು ಹೇಳಿದ್ದಾರೆ.



Join Whatsapp