ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಮಗನಿಗೆ ಲೋಕ ಸಭಾ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು, ನಾಮಪತ್ರ ವಾಪಸ್ ಪಡೆಯದಿದ್ದ ಕಾರಣ ಇಂದು ಸಂಜೆ ಪಕ್ಷದಿಂದ ಆರು ವರ್ಷಗಳ ಕಾಲ ಹೊರಹಾಕಲಾಗಿದೆ.
ತಮ್ಮ ಮಗ ಕಾಂತೇಶ್ಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶಗೊಂಡಿದ್ದ ಈಶ್ವರಪ್ಪ, ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಣದಲ್ಲಿದ್ದಾರೆ.ತಮ್ಮ ನಾಮಪತ್ರವನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್ ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಬಿಜೆಪಿ ಶಿಸ್ತು ಸಮಿತಿ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.
ದಶಕಗಳ ಕಾಲ ಕಮಲದ ಗುರುತಿನ ಮೂಲಕ ಸ್ಪರ್ಧಿಸುತ್ತಿದ್ದ ಕೆ.ಎಸ್.ಈಶ್ವರಪ್ಪ ಇದೇ ಮೊದಲಬಾರಿಗೆ ‘ಕಬ್ಬಿನ ಜೊತೆ ಇರುವ ರೈತ’ನ ಗುರುತಿನಡಿ ಸ್ಪರ್ಧಿಸಲಿದ್ದಾರೆ.