ಬೆಂಗಳೂರು: ವಿದೇಶದಿಂದ ಅಕ್ರಮವಾಗಿ 10 ಹಳದಿ ಬಣ್ಣದ ಅನಕೊಂಡ ಹಾವುಗಳನ್ನು ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ.
ಬ್ಯಾಂಕಾಕ್ ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.
ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ.