ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್’​​ಗಳಿಗೆ ಹೈಕೋರ್ಟ್ ಅನುಮತಿ

Prasthutha|

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಶುಕ್ರವಾರ ನಡೆಯಲಿದೆ. ಆ ದಿನ ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ ಉಚಿತವಾಗಿ ಆಹಾರ ನೀಡಲು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್‌ನ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

- Advertisement -

ಈ ವಿಚಾರವಾಗಿ ಹೈಕೋರ್ಟ್​ ಮಂಗಳವಾರ ಮಧ್ಯಂತರ ಆದೇಶ ನೀಡಿದೆ. ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನ ಕೆಲವು ಹೋಟೆಲ್​ಗಳು ಕಳೆದ ವರ್ಷ ವಿಧಾನಸಭೆ ಚುನಾವಣೆ ವೇಳೆಯೂ ಇದೇ ರೀತಿಯ ಪ್ರಯತ್ನ ಮಾಡಿದ್ದವು.

ಹೋಟೆಲ್​​ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಧ್ಯಂತರ ಆದೇಶ ನೀಡಿದ್ದಾರೆ.



Join Whatsapp