ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಆಪ್ತ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ನಿವಾಸದ ಮೇಲೆ ಐಟಿ ದಾಳಿಯಾಗಿದೆ.
ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆಯೇ ಐಟಿ ಅಧಿಕಾರಿಗಳು ಇಂದು(ಏಪ್ರಿಲ್ 25) ದಾಳಿ ಮಾಡಿದ್ದಾರೆ. 10ಜನ ಐಟಿ ಅಧಿಕಾರಿಗಳು ಮನೆಯ ಇಂಚಿಂಚು ಪರಿಶೀಲನೆ ಮಾಡಿದ್ದು, ಈ ವೇಳೆ ಕೋಟ್ಯಾಂತರ ರೂಪಾಯಿ ನಗದು ಪತ್ತೆಯಾಗಿದೆ.