ಹುಬ್ಬಳ್ಳಿ: ಗುರುವಾರ ಕೊಲೆಯಾದ ನೇಹಾ ನಿವಾಸಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ, ಪೋಷಕರಿಗೆ ಸಾಂತ್ವನ ಹೇಳಿದ್ದರು. ಜೊತೆಗೆ ಆರೋಪಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆ ನೀಡಿದ್ದರು.
ಈ ವೇಳೆ ಭದ್ರತೆ ಒದಗಿಸುವಂತೆ ಸಿಎಂಗೆ ನೇಹಾ ತಂದೆ ನಿರಂಜನ ಮನವಿ ಮಾಡಿದ ಬೆನ್ನಲ್ಲೇ ನಗರದ ಬಿಡನಾಳದಲ್ಲಿರುವ ನಿರಂಜನ ಹಿರೇಮಠ ನಿವಾಸಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಜೀವ ಬೆದರಿಕೆಯಿದೆ ಎಂದು ನಿರಂಜನ ಅವರು ದೂರು ನೀಡಿದ್ದರು. ಹೀಗಾಗಿ ಭದ್ರತೆ ಒದಗಿಸುವ ಮೂಲಕ ರಾಜ್ಯ ಸರ್ಕಾರ ಸ್ಪಂದಿಸಿದೆ.