ರಾಜ್ಯದ ಮೊದಲ ಹಂತದ ಮತದಾನ: 2,172 ಪ್ರಕರಣ ದಾಖಲು

Prasthutha|

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಶುಕ್ರವಾರ ಮತದಾನ ನಡೆಯಿತು.

- Advertisement -

ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಎಸ್​ಎಸ್​ಟಿ ಮತ್ತು ಪೊಲೀಸ್​ ಇಲಾಖೆ ರಾಜ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಮತ್ತು ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದು, ಈ ಸಂಬಂಧ 2,172 ಪ್ರಕರಣಗಳು ದಾಖಲಾಗಿವೆ. ಅಬಕಾರಿ ಇಲಾಖೆ 3098 ಹೀನಸ್ ಪ್ರಕರಣಗಳನ್ನು ದಾಖಲಿಸಿದೆ.

ಲೈಸೆನ್ಸ್ ಉಲ್ಲಂಘನೆ ಮಾಡಿದ್ದಕ್ಕೆ 4789 ಪ್ರಕರಣ, ಎನ್​ಡಿಪಿಎಸ್​ ಕಾಯ್ದೆ ಅಡಿ 177, ಸೆಕ್ಷನ್ 15ರಡಿ 28,299 ಪ್ರಕರಣಗಳು ದಾಖಲಾಗಿವೆ. ಅಧಿಕಾರಿಗಳು ಒಟ್ಟು 1,916 ವಾಹನಗಳನ್ನು ಜಪ್ತಿ ಮಾಡಲಾಗಿದೆ.

- Advertisement -

ಇನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಯಲಹಂಕಾದ ಮಾದನಾಯನಹಳ್ಳಿ ಬಳಿ 4.80 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ.



Join Whatsapp