ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

Prasthutha|

ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ

- Advertisement -


ನವದೆಹಲಿ: ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ.


ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ವಾಗ್ದಾನ ನೀಡಿತ್ತು.



Join Whatsapp