ಬಾಗಲಕೋಟೆ: ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ ಕಾರ್ಮಿಕ ನಿರೀಕ್ಷಕ ರಮೇಶ್ ಭೀಮಪ್ಪ ಸಿಂದಗಿ ದೂರು ಆಧರಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ಈ ಮೂಲಕ ಕಳೆದ ಒಂದು ವಾರದೊಳಗೆ ಎರಡನೇ ಪ್ರಕರಣ ದಾಖಲಾದಂತಾಗಿದೆ. ಏ.29ರಂದು ನವನಗರದಲ್ಲಿ ನಡೆದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಬಹಿರಂಗ ಭಾಷಣದ ವೇಳೆ ಮಾತನಾಡಿದ್ದ ಬಿಜೆಪಿ ಶಾಸಕ ಯತ್ನಾಳ್, ‘ ಸಚಿವ ಶಿವಾನಂದ ಪಾಟೀಲ್ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುವಂತಹ, ಮತೀಯ ಭಾವನೆ ಕೆರಳಿಸಿದ ಹಿನ್ನೆಲೆಯಲ್ಲಿ ಕಾರ್ಮಿಕ ನಿರೀಕ್ಷಕ ರಮೇಶ್ ಭೀಮಪ್ಪ ಸಿಂದಗಿ ಅವರಿಂದ ಸರ್ಕಾರದ ಪರವಾಗಿ ದೂರು ದಾಖಲು ಮಾಡಿದ್ದು, ಐಪಿಸಿ ಮತ್ತು ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.