ಸಲ್ಮಾನ್ ಖಾನ್ ಮನೆ ಎದುರು ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

Prasthutha|

ಮುಂಬೈ: ನಟ ಸಲ್ಮಾನ್ ಖಾನ್ ಮನೆ ಎದುರು ನಡೆದಿದ್ದ ಗುಂಡಿನ ದಾಳಿಯ ಆರೋಪಿ ಅನುಜ್ ಪೊಲೀಸ್ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

- Advertisement -


ಸಲ್ಮಾನ್ ಮನೆ ಮೇಲೆ ಗುಂಡು ಹಾರಿಸಿದ ಶೂಟರ್ ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪ ಅನುಜ್ ಮೇಲಿದೆ. ಸದ್ಯ ಅನುಜ್ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಸಲ್ಮಾನ್ ಖಾನ್ ಮನೆಯಲ್ಲಿ ಫೈರಿಂಗ್ ಪ್ರಕರಣ ದಿನಕ್ಕೊಂದು ಹೊಸ ರೂಪ ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳಾದ ವಿಕ್ಕಿ ಗುಪ್ತಾ (24), ಸಾಗರ್ ಪಾಲ್ (21) ಮತ್ತು ಅನುಜ್ ಥಾಪನ್ (32) ಪೊಲೀಸರ ವಶದಲ್ಲಿದ್ದಾರೆ.



Join Whatsapp