ಪ್ರಜ್ವಲ್ ರೇವಣ್ಣರದ್ದು ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಹುಲ್ ಗಾಂಧಿ

Prasthutha|

ಶಿವಮೊಗ್ಗ: ಕರ್ನಾಟಕದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವು ಕೇವಲ ಲೈಂಗಿಕ ಹಗರಣವಲ್ಲ, ಅದೊಂದು ಸಾಮೂಹಿಕ ಅತ್ಯಾಚಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ ಸಮಾವೇಶದಲ್ಲಿ ಮಾತನಾಡಿದ ಕ ರಾಹುಲ್‌ ಗಾಂಧಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡ ನೇತೃತ್ವದ ಜನತಾ ದಳದ (ಜಾತ್ಯತೀತ) ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. “ಸಾಮೂಹಿಕ ಅತ್ಯಾಚಾರಿ”ಯ ಪರವಾಗಿ ಮತ ಕೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರ ಅಶ್ಲೀಲ ವೀಡಿಯೊಗಳನ್ನು ಮಾಡಿದ್ದಾರೆ. ನಮ್ಮ ದೇಶದ ಪ್ರಧಾನಿ ಮೋದಿ ಸಾರ್ವಜನಿಕ ವೇದಿಕೆಯಲ್ಲೇ ಆ ಅತ್ಯಾಚಾರಿಗೆ ಬೆಂಬಲ ನೀಡಿ, ಅವರ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ. ಬಳಿಕ ವಿದೇಶಕ್ಕೆ ಪರಾರಿಯಾಗುವುದನ್ನು ತಡೆಯಲು ಅಧಿಕಾರವಿದ್ದರೂ ತಡೆಯಲಿಲ್ಲ ಎಂದು ರಾಹುಲ್ ಗಾಂಧಿ ಕಿಡಿಗಾರಿದ್ದಾರೆ.



Join Whatsapp