ಸಿಡ್ನಿ: ಅಮೆರಿಕದಾದ್ಯಂತ ವಿವಿಗಳಲ್ಲಿ ಇಸ್ರೇಲ್ ಪ್ಯಾಲೆಸ್ತೀನ್‌ನಲ್ಲಿ ನಡೆಸುತ್ತಿರುವ ಅಮಾನವೀಯ ಹತ್ಯಾಕಾಂಡವನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿದಿರುವಂತೆಯೇ ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳ ಕ್ಯಾಂಪಸ್‍ಗಳಲ್ಲೂ ಪ್ಯಾಲೆಸ್ತೀನ್ ಪರ, ಇಸ್ರೇಲ್ ವಿರೋಧಿ ಪ್ರತಿಭಟನೆ ಆರಂಭವಾಗಿದೆ. ಮೆಲ್ಬೋರ್ನ್, ಕ್ಯಾನ್‍ಬೆರಾ ಹಾಗೂ ಇತರ ಪ್ರಮುಖ ನಗರಗಳಲ್ಲೂ ಪ್ರತಿಭಟನೆ ನಡೆದಿದೆ.
ಆಸ್ಟ್ರೇಲಿಯಾದ ಹಲವು ವಿವಿಗಳ ಕ್ಯಾಂಪಸ್‍ಲ್ಲಿ ವಿದ್ಯಾರ್ಥಿಗಳು ತಾತ್ಕಾಲಿಕ ಶಿಬಿರ ರಚಿಸಿಕೊಂಡು ಹಗಲು-ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣವನ್ನು ವಿರೋಧಿಸುತ್ತಿರುವ ಪ್ರತಿಭಟನಕಾರರು, ಇಸ್ರೇಲ್‍ನ ಶಸ್ತ್ರಾಸ್ತ್ರ ಉತ್ಪಾದಕರ ಜತೆಗಿನ ಸಂಶೋಧನಾ ಸಹಭಾಗಿತ್ವವನ್ನು ರದ್ದುಗೊಳಿಸುವಂತೆ ವಿವಿ ಆಡಳಿತವನ್ನು ಆಗ್ರಹಿಸಿದ್ದಾರೆ.
ಆಸ್ಟ್ರೇಲಿಯಾದ ಅತ್ಯಂತ ಹಳೆಯ ಶಿಕ್ಷಣ ಸಂಸ್ಥೆಯಾದ ಸಿಡ್ನಿ ವಿವಿಯಲ್ಲಿ ಶುಕ್ರವಾರ ಪ್ಯಾಲೆಸ್ತೀನ್ ಪರ ಮತ್ತು ಇಸ್ರೇಲ್ ಪರ ಗುಂಪಿನ ನಡುವೆ ಮಾತಿನ ಚಕಮಕಿ, ಗಲಾಟೆ ನಡೆದಿದೆ. ಆದರೆ ತಕ್ಷಣ ಮಧ್ಯಪ್ರವೇಶಿಸಿದ ಭದ್ರತಾ ಪಡೆ ಪರಿಸ್ಥಿತಿಯನ್ನು ನಿಯಂತ್ರಿಸಿದೆ ಎಂದು ಆಸ್ಟ್ರೇಲಿಯನ್ ಬ್ರಾಡ್‍ಕಾಸ್ಟಿಂಗ್ ಕಾರ್ಪೊರೇಶನ್ ವರದಿ ಮಾಡಿದೆ.