ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಬಿಗಿ ಭದ್ರತೆ

Prasthutha|

ಮಂಗಳೂರು: ಇಮೇಲ್ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಿದ್ದಾರೆ.

- Advertisement -

ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ವಿಮಾನ ನಿಲ್ದಾಣ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಜೊತೆಗೆ, ಮೂರು ವಿಮಾನಗಳಲ್ಲಿಯೂ ಬಾಂಬ್ ಇಡಲಾಗಿದೆ. ಎಲ್ಲ ಬಾಂಬ್ಗಳು ಸ್ಫೋಟಗೊಳ್ಳುವ ಮೂಲಕ ಕೆಲವೇ ಗಂಟೆಗಳಲ್ಲಿ ಇಡೀ ದೇಶವೇ ಬೆಚ್ಚಿ ಬೀಳುವಂತಹ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ ಎಂದು ಇಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿದೆ. ಎಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ಬಂದಿದ್ದು, ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಈ ಪ್ರಕರಣದ ತಡವಾಗಿ ಬೆಳಕಿಗೆ ಬಂದಿದ್ದು, ಬಾಂಬ್ ಬೆದರಿಕೆ ಪ್ರಕರಣವನ್ನು ಪೊಲೀಸರು ಗೌಪ್ಯವಾಗಿಟ್ಟು ವಿಮಾನ ನಿಲ್ದಾಣದಲ್ಲಿ ಬಾಂಬ್ ಪರಿಶೀಲನೆ ಮಾಡಲಾಗಿದೆ. ಜೊತೆಗೆ, ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ.



Join Whatsapp