ಬೆಂಗಳೂರು: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವಿರುದ್ಧ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಅವಹೇಳನಕಾರಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ರವರ ವಿರುದ್ಧ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಬೇಟಿ ಮಾಡಿ ದೂರು ನೀಡಲಾಯಿತು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಹೇಳಿದ್ದಾರೆ.
ಚುನಾವಣಾಧಿಕಾರಿಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಅವರು, ವೆಲ್ಫೇರ್ ಪಾರ್ಟಿಯು ದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಅಮಿತ್ ಶಾ ಸುಳ್ಳಾರೋಪ ಹೊರಿಸಿದ್ದರು. ಇದು ಪಕ್ಷದ ವರ್ಚಸ್ಸಿಗೆ ದಕ್ಕೆ ತಂದಿರುತ್ತದೆ.
ವೆಲ್ಫೇರ್ ಪಾರ್ಟಿ ಚುನಾವಣಾ ಆಯೋಗದಲ್ಲಿ ಅಧಿಕೃತವಾಗಿ ನೋಂದಾಯಿತ ಪಕ್ಷವಾಗಿದ್ದು ಕಳೆದ 13 ವರುಷಗಳಿಂದ ಸಂವಿಧಾನಿಕವಾಗಿ ಸೇವೆ ಸಲ್ಲಿಸುತ್ತಿದೆ.
ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿ ಯಾವುದೇ ಸಾಧನೆ ಮಾಡದೆ ಸೋಲಿನ ಸುಳಿವು ಸಿಕ್ಕಿದಾಗ ಹತಾಶರಾದ ಶಾ ಇಂತಹ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ಜನರು ಇಂತಹ ದ್ದಕ್ಕೆ ಚುನಾವಣೆಯಲ್ಲಿ ಸೂಕ್ತ ರೀತಿಯಲ್ಲಿ ಉತ್ತರ ನೀಡಬೇಕೆಂದು ಅವರು ಮನವಿ ಮಾಡಿದರು. ತಂಡದಲ್ಲಿ ಪಕ್ಷದ ಉಪಾಧ್ಯಕ್ಷ ಹಬಿಬುಲ್ಲಾಹ ಖಾನ್, ಪ್ರಧಾನ ಕಾರ್ಯದರ್ಶಿ ರಿಯಾಝ್ ಮುಖಂಡರಾದ ಪ್ರಭಾಕರ್ ರವರೂ ಪಾಲ್ಗೊಂಡಿದ್ದರು.