ಬೆಂಗಳೂರು: ಹೆಚ್ ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ ರೇವಣ್ಣ ನಿವಾಸಕ್ಕೆ ಕರೆತಂದು ವಿಶೇಷ ತನಿಖಾ ದಳ(ಎಸ್ಐಟಿ) ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
ರೇವಣ್ಣ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿ ಆರು ಮಂದಿ ಅಧಿಕಾರಿಗಳ ತಂಡದೊಂದಿಗೆ ಸಂತ್ರಸ್ತೆ ಆಗಮಿಸಿದ್ದಾರೆ. ಈ ವೇಳೆ ಸಂತ್ರಸ್ತೆಯ ಹೇಳಿಕೆ, ಮಹಜರು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಚಿತ್ರೀಕರಣ ಮಾಡಲಾಯಿತು.