ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟಕ್ಕೆ ಬಹುಮತ । ‘ಟೈಮ್ಸ್ ನೌ’ –ಸಿ ವೋಟರ್ ಸಮೀಕ್ಷೆ

Prasthutha|

- Advertisement -

ತಮಿಳುನಾಡಿನ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟವು ಗೆಲುವು ಸಾಧಿಸಲಿದೆ ಎಂದು ಟೈಮ್ಸ್ ನೌ-ಸಿ ವೋಟರ್ ಸಮೀಕ್ಷೆ ಅಭಿಪ್ರಾಯಿಸಿದೆ. ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ, ಡಿಎಂಕೆ ಮೈತ್ರಿಕೂಟವು 158 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದ್ದರೆ, ಬಿಜೆಪಿ – ಎಐಎಡಿಎಂಕೆ ಮೈತ್ರಿಕೂಟವು 65 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎನ್ನಲಾಗಿದೆ.

ತಮಿಳುನಾಡು ರಾಜ್ಯದ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಿದೆ. 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 6ರಂದು ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ಡಿಎಂಕೆ ಹಾಗೂ ಕಾಂಗ್ರೆಸ್ ಮೈತ್ರಿಕೂಟಕ್ಕೆ ಈ ಭಾರಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಸ್ಥಾನಗಳು ಲಭಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಈ ಬಾರಿ ರಾಜ್ಯದಲ್ಲಿ ಆಡಳಿತಾರೂಢ ಎಐಎಡಿಎಂಕೆಗೆ ಭಾರೀ ಮುಖಭಂಗವಾಗಲಿದೆ ಎಂದು ಟೈಮ್ಸ್ ನೌ ಸಮೀಕ್ಷೆ ವರದಿ ಮಾಡಿದೆ.

- Advertisement -

ತಮಿಳುನಾಡಿನಲ್ಲಿ ಹಾಲಿ ಮುಖ್ಯಮಂತ್ರಿಗೆ ಪಳನಿಸ್ವಾಮಿಗೆ ಹೋಲಿಸಿದರೆ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅವರು ಮುಂದಿನ ಮುಖ್ಯಮಂತ್ರಿ ಆಗಲು ಸೂಕ್ತ ವ್ಯಕ್ತಿ ಎಂದು ಸಮೀಕ್ಷೆಯಲ್ಲಿ ಜನತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.



Join Whatsapp