ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧ 7 ವಿಕೆಟ್​ ಸುಲಭ ವಿಜಯ ದಾಖಲಿಸಿದ ಮುಂಬೈ ಇಂಡಿಯನ್ಸ್‌

Prasthutha|

ಮುಂಬೈ: ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್‌ ಮತ್ತು ಸನ್‌ರೈರ್ಸ್ ಹೈದ್ರಾಬಾದ್‌ ನಡುವಿನ, ಐಪಿಎಲ್​ 17ನೇ ಆವೃತ್ತಿಯ 55ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್‌ ತಂಡ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧ 7 ವಿಕೆಟ್​ ಸುಲಭ ವಿಜಯ ದಾಖಲಿಸಿದೆ.

- Advertisement -

ಇದು ಮುಂಬಯಿ ತಂಡಕ್ಕೆ ಹಾಲಿ ಆವೃತ್ತಿಯ 12 ಪಂದ್ಯಗಳಲ್ಲಿ 4ನೇ ಗೆಲುವಾಗಿದೆ. ಇದರೊಂದಿಗೆ 10ನೇ ಸ್ಥಾನದಿಂದ ಒಂದು ಸ್ಥಾನ ಮೇಲ್ಕಕೇರಿದೆ. ಇದೇ ವೇಳೆ ಕಳೆದ ಆವೃತ್ತಿಯ ರನ್ನರ್​ ಅಪ್​ ತಂಡ ಗುಜರಾತ್​ ಕೊನೇ ಸ್ಥಾನಕ್ಕೆ ಇಳಿದಿದೆ.

ಟಾಸ್​ ಗೆದ್ದ ಮುಂಬಯಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್​ ತಂಡ ತನ್ನ ಪಾಲಿನ 20 ಓವರ್​ಗಳಲ್ಲಿ 8 ವಿಕೆಟ್​ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್​ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.

- Advertisement -

ಮುಂಬೈ ಪರ ಮಾರಕ ಬೌಲಿಂಗ್ ದಾಳಿ ಸಂಘಟಿಸಿದ ಪಿಯೂಶ್​ ಚಾವ್ಲಾ 33 ರನ್​ಗೆ 3 ವಿಕೆಟ್ ಪಡೆದರೆ ಹಾರ್ದಿಕ್ ಪಾಂಡ್ಯ 31 ರನ್​ಗೆ 3 ವಿಕೆಟ್ ಉರುಳಿಸಿದರು.



Join Whatsapp