ಎಸ್ ಐಟಿ ಎಂದರೆ ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್: ಕುಮಾರಸ್ವಾಮಿ ಕಿಡಿ

Prasthutha|

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ ಐಟಿ ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ಆ ವಿಚಾರವಾಗಿ ದೂರು ನೀಡಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಪ್ರಜ್ವಲ್ ಪ್ರಕರಣದಲ್ಲಿ 16 ವರ್ಷ ವಯಸ್ಸಿನ ಬಾಲಕಿಯೂ ಸಂತ್ರಸ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗವಾಗಿ ಹೇಳಿದ್ದಾರೆ. ಯಾವ ಆಧಾರದ ಮೇಲೆ ರಾಹುಲ್ ಗಾಂಧಿ ಆ ಹೇಳಿಕೆ ನೀಡಿದರು? ಆ ಬಗ್ಗೆ ಎಸ್ಐಟಿ ಯಾಕೆ ಇನ್ನೂ ತನಿಖೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.



Join Whatsapp