ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರಲ್ಲ: ಡಿಕೆ ಶಿವಕುಮಾರ್

Prasthutha|

ಚಿಕ್ಕಮಗಳೂರು: ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

- Advertisement -

ರಾಜ್ಯವ್ಯಾಪಿ ಪೆನ್ ಡ್ರೈವ್ ಹಂಚಿದ್ದು ಡಿಕೆ ಶಿವಕುಮಾರ್ ಮತ್ತು ತಂಡ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್ ನಲ್ಲಿ ಸುದ್ದಿ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ತೋರಿಸುವುದಿಲ್ಲ. ಕಥಾನಾಯಕ, ನಿರ್ಮಾಪಕ, ನಿರ್ದೇಶಕ ಎಲ್ಲಾ ಎಲ್ಲಾ ಇವರೇ ಎಂದು ಕಿಡಿಕಾರಿದರು.


ಪೆನ್ ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತಿದೆ. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ. ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲ್ ಎಂದು ಕಿಡಿಕಾರಿದ್ದಾರೆ.



Join Whatsapp