ಬೆಳ್ತಂಗಡಿ: SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರು ಮಾಜಿ ಶಸಕ ಕೆ ವಸಂತ ಬಂಗೇರ ಅವರ ಅಂತಿಮ ದರ್ಶನ ಪಡೆದರು. ಬಳಿಕ ವಸಂತ ಬಂಗೇರರ ಪಾರ್ತಿವ ಶರೀರದ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡರು.
ಬೆಳ್ತಂಗಡಿ ನಗರದ ಕ್ರೀಡಾಂಗಣದಲ್ಲಿ ಬೆಳಿಗ್ಗೆ ಒಂಬತ್ತು ಗಂಟೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಾಡಿನೆಲ್ಲೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಬೆಳ್ತಂಗಡಿಗೆ ಆಗಮಿಸಿ ಅವರ ಅಂತಿಮ ದರ್ಶನ ಪಡೆದರು.