ಭಾಂಗ್ಲಾ ವಿರುದ್ಧ ೦-5 ಕ್ಲೀನ್ ಸ್ವೀಪ್ ಮಾಡಿದ ಭಾರತದ ವನಿತೆಯರು

Prasthutha|

ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ವಿರುದ್ಧದ 5 ಪಂದ್ಯಗಳ ಟಿ 20 ಸರಣಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಎಲ್ಲಾ ಪಂದ್ಯಗಳನ್ನು ಗೆದ್ದು 0-5 ಅಂತರದ ಗೆಲುವು ಸಾಧಿಸಿದೆ. ಈ ಮೂಲಕ ಆತಿಥೇಯ ತಂಡ ಪ್ರವಾಸಿ ಭಾರತ ತಂಡದ ಎದುರು ಭರ್ಜರಿ ಮುಖಭಂಗ ಅನುಭವಿಸಿದೆ.

- Advertisement -

ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಒವರ್​ಗಳಲ್ಲಿ 5 ವಿಕೆಟ್​​ ನಷ್ಟಕ್ಕೆ 156 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಬಾಂಗ್ಲಾ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ಗೆ 135 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಭಾರತೀಯ ಬೌಲರ್​ಗಳು ನಿಯಮಿತವಾಗಿ ವಿಕೆಟ್​ಗಳನ್ನು ಉರುಳಿಸಿದ ಕಾರಣ ಬಾಂಗ್ಲಾದೇಶದ ಬ್ಯಾಟರ್​ಗಳಿಗೆ ಚೇತರಿಸಿಕೊಳ್ಳುವುದಕ್ಕೆ ಅವಕಾಶ ಸಿಗಲಿಲ್ಲ. ಇದು ಆತಿಥೇಯರ ಮೇಲೆ ಒತ್ತಡ ಹೇರಿತು. 

- Advertisement -



Join Whatsapp