ಮಾಜಿ ಸಿಎಂ ಎಸ್.ಎಂ. ಕೃಷ್ಣ ಆರೋಗ್ಯ ಸ್ಥಿರ

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯ ಸ್ಥಿತಿ ಬಗ್ಗೆ ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ. ಆಸ್ಪತ್ರೆ ಪ್ರಕಾರ ಕೃಷ್ಣ ಅವರ ಆರೋಗ್ಯ ಸ್ಥೀರವಾಗಿದ್ದು ಚಿಕಿತ್ಸೆಗೆ ಸಾಕಷ್ಟು ಸ್ಪಂದಿಸುತ್ತಿದ್ದಾರೆ. ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

- Advertisement -


ವಯೋಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಕೃಷ್ಣ ಅವರನ್ನು ಚಿಕಿತ್ಸೆಗಾಗಿ ಏಪ್ರಿಲ್ 21ರಂದು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಏಪ್ರಿಲ್ 29ರಂದು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.



Join Whatsapp